ನಡೆದಾಡುವ ದೇವರು ಡಾ ||ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿ ರವರ 114 ನೇ ಜನ್ಮ ದಿನದ ಪ್ರಯುಕ್ತ ಶ್ರೀ ಓಂಕಾರ ಹುಚ್ಚನಾಗಲಿಂಗಸ್ವಾಮಿ ಅನಾಥ ಆಶ್ರಮ ದಲಿ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ ವಿತರಣೆ ಮೂಲಕ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.

ನಾಡಿನ ಸಮಸ್ತ ಜನತೆಗೆ ಪವಿತ್ರ “ಮಹಾಶಿವರಾತ್ರಿ” ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶಿವರಾತ್ರಿಯು ಎಲ್ಲರ ಜೀವನದಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಐಶ್ವರ್ಯ ಹಾಗೂ ಸ್ನೇಹ ಸೌಹಾರ್ದತೆಯನ್ನು ಹೊತ್ತು ತರಲಿ ಎಂದು ಆ ಭಗವಂತನಲ್ಲಿ ಕೇಳಿಕೊಳ್ಳುವುದರ ಮೂಲಕ ಮಹಾದೇವನ ಕೃಪೆ ಸದಾ ನಿಮ್ಮೆಲ್ಲರ ಮೇಲೆ ಇರಲಿ ಎಂದು ಆಶಿಸುತ್ತೇನೆ.

ಭಾರತ ದೇಶದ ಪ್ರಜಾಪ್ರಭುತ್ವದ ಕರ್ತೃ, ಭಾರತೀಯ ನ್ಯಾಯವಾದಿ ಅರ್ಥಶಾಸ್ತ್ರಜ್ಞ, ಸಾಮಾಜಿಕ ಸಮಾನತೆ ಹಾಗೂ ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕ ” ಡಾ|| ಬಿ. ಆರ್ ಅಂಬೇಡ್ಕರ್ ಅವರ ಜನ್ಮದಿನೋತ್ಸವದ ಶುಭಾಶಯಗಳು “

ಡಾ|| ಬಿ. ಆರ್ ಅಂಬೇಡ್ಕರ್ ಅವರು ಸೂಚಿಸಿದ ಮಾರ್ಗದಲ್ಲಿ ನಾವೆಲ್ಲರೂ ನಡೆಯುವುದೇ ನಾವು ಅವರಿಗೆ ನೀಡುವ ಮಹಾ ಗೌರವ. ಈ ದಿನ ಬಾಬಾ ಸಾಹೇಬರಿಗೆ ನಾವೆಲ್ಲರೂ ತಲೆಬಾಗಿ ನಮಿಸೋಣ.

ನಾಡಿನ ಸಮಸ್ತ ಜನತೆಗೆ ಹಿಂದೂ ಹೊಸ ವರ್ಷ “ಯುಗಾದಿ” ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ಹಬ್ಬವು ಎಲ್ಲರ ಬದುಕಲ್ಲಿ ಆರೋಗ್ಯ, ಸುಖ, ಶಾಂತಿ, ಸಮೃದ್ಧಿ, ಸಂತೋಷವನ್ನು ಹೊತ್ತು ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

“ಸಮಸ್ತ ಲೋಕಾ ಸರ್ವೇ ಜನಾ ಸುಖಿನೋ ಭವಂತು”

ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಪಶು ಸಂಗೋಪನಾ ಸಚಿವರಾದ ಶ್ರೀ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು. ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸುಧಾ ಜಯರುದ್ರೇಶ್, ಬಿಜೆಪಿಯ ದಾವಣಗೆರೆ ಜಿಲ್ಲಾ ಪ್ರಧಾನ … Continue readingಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾದ ಪ್ರಯುಕ್ತ ದಾವಣಗೆರೆ ಬಿಜೆಪಿ ಉತ್ತರ ಮಂಡಲದ ವತಿಯಿಂದ ಇಂದು ಬೆಳಿಗ್ಗೆ ನೀಟುವಳ್ಳಿಯ ದುರ್ಗಾಂಬಿಕ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು.

ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ

ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ಮಸೂದೆ ಯನ್ನು ಮಂಡಿಸಿದ ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಅವರಗೆರೆ ಗೋಶಾಲೆಯಲ್ಲಿ ಗೋವಿನ ಪೂಜೆ ಮಾಡುವುದರ ಮೂಲಕ ಸ್ವಾಗತಿಸಲಾಯಿತು…

ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ

ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ದಾವಣಗೆರೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ರ ದೀಪೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರೊಂದಿಗೆ ಭಾಗವಹಿಸಲಾಯಿತು‌

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನ

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನದ ಅಂಗವಾಗಿ ದಿನಾಂಕ.19/1/2021 ರಂದು ಬೆಳಿಗ್ಗೆ 8.30 ರಿಂದ ಶ್ರೀರಾಮ ಮಂದಿರದ ನಿಧಿ ಸಮರ್ಪಣೆ ಅಭಿಯಾನ ಕಾರ್ಯಕ್ರಮವನ್ನು ವಿನೊಬನಗರ_16 ನೇ ವಾರ್ಡ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್ ಪ್ರಮುಖರಾದ ಚೇತನ್, ರೂಪೇಶ್, ರವಿ, ಬಸವರಾಜ್ ಉಚ್ಚಂಗಿದುರ್ಗ, ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸಕರಿಯಪ್ಪ, ವಕೀಲರ ಸಂಘದ ನಿಕಟಪೂರ್ವ ಉಪಾಧ್ಯಕ್ಷರಾದ ಹೆಚ್.ದಿವಾಕರ್, ಡಿ.ಎಂ.ಕಾಂತರಾಜ್, ಮಹಿಳಾ ಮೋರ್ಚದ … Continue readingಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹದ ಅಭಿಯಾನ